Site icon BosstvKannada

ನಕಲಿ ಲೋನ್ ಸೃಷ್ಟಿಸಿ ಕೋಟಿ ಕೋಟಿ ವಂಚನೆ

ಬೆಂಗಳೂರು: ಬ್ಯಾಂಕ್ ನಲ್ಲಿ ನಕಲಿ ಲೋನ್ ಸೃಷ್ಟಿಸಿ ಕೋಟಿ ಕೋಟಿ ವಂಚಿಸಿರುವ ಘಟನೆಯೊಂದು ನಡೆದಿದೆ.

ಬೆಂಗಳೂರಿನ (Bengaluru) ಕೆನರಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ಬೆಳಕಿಗೆ ಬಂದಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಆರೋಪ ಕೇಳಿ ಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ. ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿರುವ ಆರೋಪ ಕೇಳಿ ಬಂದಿದೆ. ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಈಗ ಪರಾರಿಯಾಗಿದ್ದಾನೆ ಎನ್ನಲಾಗಿದೆ.

41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version