ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ (Gali Janardhana Reddy) ತೆಲಂಗಾಣ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಪಡಿಸಿ, ಹಲವು ಷರತ್ತುಗಳನ್ನ ವಿಧಿಸಿ ತೆಲಂಗಾಣ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ. 10 ಲಕ್ಷ ರೂಪಾಯಿ ಮೌಲ್ಯದ ಎರಡು ಶೂರಿಟಿ ನೀಡಲು ಜನಾರ್ದನ್ ರೆಡ್ಡಿಗೆ ಸೂಚಿಸಿದೆ.
ಅಲ್ಲದೇ ಜನಾರ್ದನ ರೆಡ್ಡಿ ದೇಶ ಬಿಟ್ಟು ಹೋಗದಂತೆ ಷರತ್ತು ಬದ್ದ ಜಾಮೀನು ನೀಡಲಾಗಿದೆ. ಜೊತೆಗೆ ಅವರ ಪಾಸ್ಪೋರ್ಟ್ ವಶಕ್ಕೆ ಪಡೆಯಲು ತೆಲಂಗಾಣ ಹೈಕೋರ್ಟ್ ಸೂಚಿಸಿದೆ. ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಇಂದು ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡಿದೆ.
ಏನಿದು ಜನಾರ್ದನ್ ರೆಡ್ಡಿ ಪ್ರಕರಣ
ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಜನಾರ್ದನ್ ರೆಡ್ಡಿ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐನ ವಿಶೇಷ ಕೋರ್ಟ್, ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಸುಮಾರು 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿತ್ತು. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಆಗಿತ್ತು.
Read Also : ಮಾಲ್ಡೀವ್ಸ್ ಪ್ರವಾಸೋದ್ಯಮದ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕತ್ರಿನಾ ಕೈಫ್ ನೇಮಕ
ಈ ಪ್ರಕರಣ ಕುರಿತು ಜನಾರ್ದನ್ ರೆಡ್ಡಿ ಹಾಗೂ ಅವರ ಸಂಬಂಧಿ ಒಎಂಸಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಿತ್ತು. ಆದ್ರೀಗ ಸಿಬಿಐನ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಪಡಿಸಿ, ತೆಲಂಗಾಣ ಹೈಕೋರ್ಟ್ ಜನಾರ್ಧನ್ ರೆಡ್ಡಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
