ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಕಿರಾತಕರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಕೃತ್ಯ ಎಸಗಿದ ದುಷ್ಕರ್ಮಿಗಳು ಎನ್ನಲಾಗಿದೆ. 7ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾಮುಕರು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ನ. 23ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಿರಾತಕರು ಬಾಲಕಿ ಹಾಗೂ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿದ್ದರಿಂದಾಗಿ ಅದು ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಹಿಟ್ಟುಬೀಸಲು ತೆರಳಿದ್ದ ಬಾಲಕಿ ಮೇಲೆ ಆರೋಪಿಗಳು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

Share.
Leave A Reply