ಕಳೆದ ವಾರವಷ್ಟೇ ನೇಪಾಳದಲ್ಲಿ ಸೋಷಿಯಲ್‌ ಮೀಡಿಯಾವನ್ನ ಬ್ಯಾನ್‌ ಮಾಡಲಾಗಿತ್ತು. ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ ಸೇರಿದಂತೆ 26 ಸೋಷಿಯಲ್‌ ಮೀಡಿಯಾ ಆಪ್‌ಗಳನ್ನ ನಿಷೇಧ ಮಾಡಲಾಗಿದೆ. ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗಿದ್ರಿಂದ ಜನ ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ನೇಪಾಳದಲ್ಲಿ ಜನರು ಸರ್ಕಾರದ ವಿರುದ್ಧ ಸಿಡಿದೆದ್ದು, ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಅಲ್ಲಿನ ಸ್ಥಿತಿ ಈಗ ತೀರಾ ಹದಗೆಟ್ಟಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಯುವ ಜನತೆ ನೇಪಾಳದ ರಾಜಧಾನಿ ಕಟ್ಮಂಡುವಿನಲ್ಲಿ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಓರ್ವ ಯುವಕ ಪ್ರಾಣ ಬಿಟ್ಟಿದ್ದಾನೆ. ನೇಪಾಳ ಸರ್ಕಾರ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ನೋಂದಣಿಗೆ ಆಗಸ್ಟ್ 28 ರಂದು 7 ದಿನಗಳ ಗಡುವು ನೀಡಿತ್ತು. ಆದ್ರೆ ಸಮಯ ಮುಕ್ತಾಯಗೊಂಡಿದ್ದರೂ ಮೆಟಾ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ರೆಡಿಟ್ ಮತ್ತು ಲಿಂಕ್ಡ್‌ಇನ್‌ನಂತಹ ಯಾವುದೇ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳು ಅರ್ಜಿಗಳನ್ನು ಸಲ್ಲಿಸಿಲ್ಲ.

ಈ ಹಿನ್ನಲೆ ನೇಪಾಳ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಳೆದ ವಾರ 24 ಸಾಮಾಜಿಕ ಜಾಲತಾಣವನ್ನ ಬ್ಯಾನ್ ಮಾಡಿತ್ತು. ಇದಕ್ಕಾಗಿ ಇಂದು ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು, ಪ್ರತಿಭಟೆಯನ್ನ ತಡೆಯಲು ಪೋಲಿಸರ ಹರಸಾಹಸ ಪಡುವಂತಾಗಿದೆ. ಯುವಜನತೆಯ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪೋಲಿಸರು ಅಶ್ರವಾಯು ಸಿಡಿಸಿದ್ದರು. ಆದ್ರೆ ಅದಕ್ಕೂ ತಲೆಕೆಡಸಿಕೊಳ್ಳದ ಜನರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಿ ಸಂಸತ್​ಗೆ ಎಂಟ್ರಿ ಕೊಟ್ಟರು. ಪೋಲಿಸರಿಂದ ಲಾಠಿ ಪ್ರಹಾರ ಮಾಡಿದರೂ ಯಾವುದೇ ಪ್ರಯೋಜನವಿಲ್ಲ ಎಂಬಂತೆ ಆಗಿದೆ.

ಸದ್ಯ ಪ್ರತಿಭಟನೆಯೂ ತೀವ್ರ ಸ್ವರೂಪ ತಾಳಿರೋ ಹಿನ್ನಲೆ ಪೋಲಿಸರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಒಬ್ಬ ಯುವಕ ಸಾವನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವು ಜನರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಇನ್ನು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗೋ ಸಾಧ್ಯತೆ ಇದೆ.

Read Also :

Share.
Leave A Reply