ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್, RCBಯ ಮಾಜಿ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ (Glenn Maxwell Retired from ODIs) ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟ್ ಬೀಸು ತ್ತಿದ್ದ ಮ್ಯಾಕ್ಸಿ ಏಕಾಏಕಿ ನಿವೃತ್ತಿ ಘೋಷಿಸಿದ್ದಾರೆ.
2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ತಿಳಿಯುತ್ತಿದ್ದಂತೆ, ಮ್ಯಾಕ್ಸ್‌ವೆಲ್ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿಯಲ್ಲಿರುವ ಜಾರ್ಜ್ ಬೈಲಿ ಜೊತೆ ಮಾತನಾಡಿದ ನಂತರ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ..
ಜಾರ್ಜ್ ಬೈಲಿ ಜೊತೆ ಮಾತನಾಡಿದ ನಂತರ, 2027ರ ಏಕದಿನ ವಿಶ್ವಕಪ್‌ನಲ್ಲಿ ಆಯ್ಕೆಯಾಗುವ ಸಾಧ್ಯತೆ ಕಡಿಮೆ ಇದೆ ಅಂತಾ ತಿಳಿದು ಬಂದ ನಂತರ, ಹೊಸ ಪ್ರತಿಭೆಗೆ ಅವಕಾಶ ನೀಡಬೇಕೆಂದು, ಈ ನಿರ್ಧಾರ ಕೈಗೊಂಡಿರುವುದಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪರ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್‌ವೆಲ್, 136 ಇನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿ 3990 ರನ್ ಬಾರಿಸಿದ್ದಾರೆ.. 119 ಇನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿ 77 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದಲ್ಲಿ ಆಡಿ ಮಿಂಚಿದ್ದ ಮ್ಯಾಕ್ಸಿ, ತಮ್ಮ ಏಕದಿನ ಕ್ರಿಕೆಟ್‌ಗೆ ಅಂತ್ಯ ಹಾಡಿದ್ದಾರೆ. ನಿವೃತ್ತಿಯಿಂದ ಬೇಸರ ಉಂಟಾಗಿದ್ದ ಅಭಿಮಾನಿಗಳಿಗೆ, ಟಿ20 ಕ್ರಿಕೆಟ್ ಆಡುವುದಾಗಿ ಹೇಳಿದ್ದಾರೆ.

