ಮಂಡ್ಯ: ಯುವಕನೋರ್ವ ಕಾವೇರಿಯಲ್ಲಿ ಈಜಲು ಹೋಗಿ ನೀರು ಪಾಲಾಗಿರುವ ಘಟನೆ ನಡೆದಿದೆ.

Independance day banner

ಈ ಘಟನೆ ಜಿಲ್ಲೆಯ (Mandya) ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ (21) ಸಾವನ್ನಪ್ಪಿರುವ ದುರ್ದೈವಿ. ಕಾವೇರಿ ನದಿಯಲ್ಲಿ (Cauvery River) ಈಜಾಡುತ್ತಿದ್ದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ (Youth) ಸಾವನ್ನಪ್ಪಿದ್ದಾನೆ.

ಪ್ರಹ್ಲಾದ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದ. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ. ಸದ್ಯ ಯುವಕನ ಮೃತದೇಹ ಹೊರ ತೆಗೆಯಲಾಗಿದೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Leave A Reply