ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಸಿಕ್ಕಿದೆ ಎಂದು ಖುಷಿಪಟ್ಟಿದ್ದ ಬೈಕ್ ಚಾಲಕರಿಗೆ ಮತ್ತೆ ಹೈಕೋರ್ಟ್ ಶಾಕ್ ನೀಡಿದೆ. ಬೈಕ್ಸ್, ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಅಂತಾ ನ್ಯಾಯಮೂರ್ತಿಗಳಾದ ವಿಭು ಬಕ್ರು ಮತ್ತು ಸಿ.ಎಂ. ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ.
ಇದು ಬೆಂಗಳೂರಿನಲ್ಲಿ, ಬೈಕ್, ಟ್ಯಾಕ್ಸಿ, ಸವಾರರಿಗೆ ನಿರಾಶೆ ಮೂಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ನೀಡುವ ಚಾಲಕರಿಗೆ ಕಿರುಕುಳ ನೀಡಬಾರದು ಅಂತಾ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬೈಕ್ ಟ್ಯಾಕ್ಸಿ ಚಾಲಕರ ಪರವಾಗಿ ಹಾಜರಾಗಿದ್ದ ವಕೀಲ ಗಿರೀಶ್ ಕುಮಾರ್, ಸರ್ಕಾರ ಅಪ್ಲಿಕೇಷನ್ ವಿರುದ್ಧ ಕ್ರಮಕೈಗೊಳ್ಳಬಹುದು. ಸೇವೆ ನೀಡುವ ಟ್ಯಾಕ್ಸಿಗಳ ಮೇಲೆ ಅಲ್ಲ. ಬೈಕ್ ಮತ್ತು ಟ್ಯಾಕ್ಸಿಗಳನ್ನ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ ಅಂತಾ ನ್ಯಾಯಪೀಠಕ್ಕೆ ದೂರು ನೀಡಿದರು.
ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ. ಬೈಕ್ ಟ್ಯಾಕ್ಸಿ ಪ್ರಸ್ತಾವನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ಹೀಗಾಗಿ, ಬೈಕ್ ಟ್ಯಾಕ್ಸಿ ಮಾಲೀಕರು, ಚಾಲಕರ ಮೇಲೆ ಕ್ರಮ ಬೇಡವೆಂದು ಹೇಳಿದ್ದೆವು.. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕಂಪನಿಗಳ ಬಗ್ಗೆ ನಾವು ಹೇಳಿಲ್ಲ ಅಂತಾ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅಲ್ಲದೇ, ವ್ಯಕ್ತಿಗಳಿಗೆ ತೊಂದರೆ ಕೊಡಬೇಡಿ ಅಂದಿರುವ ಕೋರ್ಟ್, ಬೈಕ್ ಟ್ಯಾಕ್ಸಿ ಬಗ್ಗೆ ನಿಲುವು ತಿಳಿಸುವಂತೆ ಸೂಚಿಸಿ 4 ವಾರಗಳ ಕಾಲಾವಕಾಶ ನೀಡಿ ಸೆ.22ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ
Read Also : ಮಾಸ್ಕ್ ಮ್ಯಾನ್ ಅರೆಸ್ಟ್.. ಬಿಜೆಪಿಗೆ ಡಿಕೆಶಿ ಟಾಂಗ್ : ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ, ಡಿಕೆ ವಾರ್ನಿಂಗ್!
