ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ ಬೆಳೆದಿರುವ ಮಾವನ್ನ ಆಂಧ್ರ ಸರ್ಕಾರ ಧೀಡಿರ್‌ನೆ ಖರೀದಿಸದಂತೆ ನಿರ್ಬಂಧ ಹೇರಿ ಆದೇಶಿಸಿತು. ಇದರಿಂದ ರಾಜ್ಯದ ಮಾವು ಬೆಳೆಗಾರರು ಬೆಳೆದ ಮಾವಿನ ಬೇಡಿಕೆ ಕುಸಿದು ಕಂಗಾಲಾಗಿದ್ರು. ರಾಜ್ಯದ ಮಾವು ಬೆಳೆಗಾರರು ತೀರಾ ಸಂಕಷ್ಟಕ್ಕೊಳಗಾಗಿದ್ರು.

ಆದ್ರಿಂದ ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಕಾಳಜಿ, ನಿರಂತರ ಪ್ರಯತ್ನ , ಮೇಲ್ವಿಚಾರಣೆಯಿಂದಾಗಿ ತಕ್ಣಣವೇ ಹಣ ಬಿಡುಗಡೆಗೆ ಸರ್ಕಾರಿ ‌ಅದೇಶ ಹೊರ ಬಿದ್ದಿದೆ.

ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ
ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಅಲ್ಲದೆ ಈಗಾಗಲೇ ಘೋಷಿಸಿರುವಂತೆ ಶೇ 50% ರಷ್ಟು ಮೊತ್ತವನ್ನು ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಲು ಸಹ ಕ್ರಮ ವಹಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

ರಾಜ್ಯದಲ್ಲಿ ಮಾವು ಬೆಲೆ ಕುಸಿತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ‌ ಸೆಳೆದು, ಮನವಿಗಳನ್ನು ಅರ್ಪಿಸಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ ಕೆಂದ್ರ ಕೃಷಿ ಸಚಿವರ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗೆಳೆರೆಡು ಶೇ 50-50 ಅನುಪಾತದಲ್ಲಿ ಯೋಜನೆ ಅನುಷ್ಠಾನಕ್ಕೆ ಕಳೆದ ವಾರ ಆದೇಶ ಹೊರಡಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಖರೀದಿಗೆ ಬೇಕಾದ 101 ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಹೊರಡಿಸಿ ಸುಗಮ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿದೆ. 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

Share.
Leave A Reply