ವಾಷಿಂಗ್ಟನ್‌: ಅಮೆರಿಕ ಸರ್ಕಾರ ಯೋಧರಿಗೆ ಬಂಪರ್ ಗಿಫ್ಟ್ ಘೋಷಿಸಿದೆ. ಅಮೆರಿಕವನ್ನು ವಲಸಿಗರಹಿತ ದೇಶ ಮಾಡುವತ್ತ ಹೆಜ್ಜೆ ಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಈಗಾಗಲೇ ಹಲವಾರು ಕಠಿಣ ವಲಸೆ ನೀತಿಗಳನ್ನು ಜಾರಿಗೆ ತಂದಿದ್ದಾರೆ. ಈ ಮಧ್ಯೆ ಅಲ್ಲಿನ ಸೈನಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

ಅಮೆರಿಕದ ಸ್ಥಾಪನಾ ವರ್ಷಾಚರಣೆಯ ಹಿನ್ನೆಲೆಯಲ್ಲಿ ʻವಾರಿಯರ್‌ ಡಿವಿಡೆಂಡ್‌ʼ (Warrior Dividend) ಅಂಗವಾಗಿ ಪ್ರತಿ ಅಮೆರಿಕನ್‌ ಸೈನಿಕರಿಗೆ (US Soldier) 1,776 ಡಾಲರ್‌ ಘೋಷಿಸಿದ್ದಾರೆ. ಭಾರತೀಯ ರೂಪಾಯಿಯಂತೆ 1.60 ಲಕ್ಷ ರೂ. ವಿಶೇಷ ನಗದು ಪಾವತಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದೇಶಾದ್ಯಂತ ಇರುವ 14.5 ಲಕ್ಷ ಸೈನಿಕರು ಕ್ರಿಸ್‌ಮಸ್‌ಗೆ ಮುನ್ನವೇ ತಲಾ 1.60 ಲಕ್ಷ ರೂ. ನೆರವು ಪಡೆಯಲಿದ್ದಾರೆ.

ಈ ವಿಷಯವಾಗಿ ಮಾತನಾಡಿರುವ ಟ್ರಂಪ್, 14.5 ಲಕ್ಷ ಮಿಲಿಟರಿ ಸಿಬ್ಬಂದಿಗೆ ವಿಶೇಷ ನಗದು ಪಾವತಿಯ ಬಗ್ಗೆ ಘೋಷಣೆ ಮಾಡಲಾಗಿದೆ. ಇದು ಹೆಮ್ಮೆಯ ಕ್ಷಣ. ರಾಷ್ಟ್ರ ಸ್ಥಾಪನೆಯ ಗೌರವಾರ್ಥವಾಗಿ ಪ್ರತಿ ಸೈನಿಕರಿಗೆ ವಾರಿಯರ್‌ ಡಿವಿಡೆಂಡ್‌ ಘೋಷಿಸಿದ್ದೇವೆ ಎಂದಿದ್ದಾರೆ.
ಸುಂಕದಿಂದಾಗಿ ನಾವು ಯಾರೂ ನಿರೀಕ್ಷೆ ಮಾಡದಷ್ಟು ಹೆಚ್ಚಿನ ಆದಾಯ ಗಳಿಸಿದ್ದೇವೆ. ಸುಂಕದ ಹೊಸ ಮಸೂದೆಗಳು ನಮಗೆ ಈ ನೆರವು ಘೋಷಿಸಲು ಸಹಾಯ ಮಾಡಿದೆ ಎಂದಿದ್ದಾರೆ.

Share.
Leave A Reply