ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಅತಿ ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿ ಕಂಡು ಬಂದಿದೆ. ಹಾರ್ಟ್‌ ಅಟ್ಯಾಕ್‌ನಿಂದ ಹಾಸನದಲ್ಲಿ ಮೃತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ಕಳೆದ ಒಂದು ತಿಂಗಳಿನಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸುಮಾರು 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸರಣಿ ಹೃದಯಘಾತಕ್ಕೆ ಹಾಸನ ಜನತೆ ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಜನರು ಹೃದಯ ಸಂಬಂದಿ ಕಾಯಿಲೆ ತಪಾಸಣೆಗಾಗಿ ಆಸ್ಪತ್ರೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಈ ಬಗ್ಗೆ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳದ ಬಗ್ಗೆ ತನಿಖೆಗಾಗಿ ಟೆಕ್ನಿಕಲ್ ಕಮಿಟಿ ರಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು Hassan institute of medical science ಸಹಯೋಗದೊಂದಿಗೆ 10 ದಿನದಲ್ಲಿ ವರದಿ ಸಲ್ಲಿಕೆಗೆ ಸೂಚನೆ ನೀಡಿದೆ.

Share.
Leave A Reply