ರಾಜ್ಯದ ಪ್ರಮುಖ ಕೋಮು ಸೌಹಾರ್ದ ಕ್ಷೇತ್ರವೆಂದೇ ಖ್ಯಾತವಾಗಿರುವ ಶಿರಹಟ್ಟಿ ತಾಲೂಕಿನ ವರವಿ ಶ್ರೀ ಮೌನೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅಂದಾಜು 3 ಕೋಟಿ ರೂಗಳ ಅನುದಾನವನ್ನು ಒದಗಿಸಲಾಗುವುದೆಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದಾರೆ(Green Signal).
ಗದಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಎಚ್.ಕೆ.ಪಾಟೀಲ ಅವರಿಗೆ ವರವಿ ಶ್ರೀ ಮೌನೇಶ್ವರ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಹಾಗೂ ವಿಶ್ವಕರ್ಮ ಮಹಾ ಒಕ್ಕೂಟ ಬೆಂಗಳೂರು ಇವರ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದ ಪ್ರತಿಭೆಗೆ ಸರಿಸಾಟಿಯೇ ಇಲ್ಲ. ರಾಜ್ಯದಲ್ಲಿರುವ 25000ಕ್ಕೂ ಅಧಿಕ ಗುಡಿ, ಗೋಪುರ ಶಿಲ್ಪಕಲಾ ತಾಣಗಳು ವಿಶ್ವಕರ್ಮ ರಿಂದಲೇ ನಿರ್ಮಿತವಾದವುಗಳಾಗಿವೆ.
Also Read: IPL 2025 Playoff : ಐಪಿಎಲ್ ಇತಿಹಾಸದಲ್ಲಿಯೇ ಶ್ರೇಯಸ್ ಹೊಸ ದಾಖಲೆ..!
ಇಂಥ ಕೌಶಲ್ಯಯುಕ್ತ ಸಮಾಜದ ಪುಣ್ಯ ಕ್ಷೇತ್ರವಾದ ವರವಿ ಕ್ಷೇತ್ರದ ಅಭಿವೃದ್ಧಿ ಅಗತ್ಯವಾಗಿದೆ. ಅರ್ಧಕ್ಕೇ ನಿಂತಿರುವ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ತಕ್ಷಣಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಹಾಗೂ ಹಂತ ಹಂತವಾಗಿ ಅನುದಾನ ಒದಗಿಸಲಾಗುವುದು. ಇದಲ್ಲದೆ, ಗದಗ ಜಿಲ್ಲೆಯ ಹುಲಕೋಟಿ ಬಳಿ 2.5 ಕೋಟಿ ರೂ.ಗಳ ವೆಚ್ಚದಲ್ಲಿ ವಿಶ್ವಕರ್ಮ ಕುಶಲಿಗರಿಗಾಗಿ ಕೌಶಲ್ಯ ಅಭಿವೃದ್ಧಿ ಕೇಂದ್ರವೊಂದನ್ನು ಸ್ಥಾಪಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ಭರವಸೆ ನೀಡಿದ್ರು…

