ಕೊರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,
ಹೆಚ್ಚುತ್ತಿರುವ ಹಾರ್ಟ್ ಅಟ್ಯಾಕ್ ಪ್ರಕರಣಗಳ ಸಂಬಂಧ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೊರೋನಾದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ ಎಂದರು.
ಇದು ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕೊರೋನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್‌ಎನ್‌ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು.

