ತಿರುವನಂತಪುರ: ಭಾರತೀಯ ಮಹಿಳಾ ತಂಡದ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಅವರು ಭಾರತೀಯ ಮಹಿಳಾ ತಂಡದ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆ ಸರಿಗಟ್ಟಿದ್ದಾರೆ.

Independance day banner

ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ನಡೆದ 5ನೇ ಟಿ20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಅವರ ಅದ್ಭುತ ಹಾಗೂ ಅರ್ಧಶತಕದ ನೆರವಿನಿಂದಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು.

ಈ ಮೂಲಕ ಭಾರತ ತಂಡವು ಸರಣಿಯನ್ನು ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿತು..ಕೊನೆಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ನಾಯಕಿ ಹರ್ಮನ್‌ಪ್ರೀತ್ ಕೌರ್(Harmanpreet Kaur) ಮಾಜಿ ಆಟಗಾರ್ತಿ ಮಿಥಾಲಿ ರಾಜ್‌(Mithali Raj) ಅವರ ದಾಖಲೆ ಸರಿಗಟ್ಟಿದ್ದಾರೆ.

ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮಿಥಾಲಿ ರಾಜ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರೂ ಆಟಗಾರ್ತಿಯರು 12 ಸಲ ಪ್ರಶಸ್ತಿ ಪಡೆದಿದ್ದಾರೆ. ಕೌರ್ 43 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 68 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರರು
12 – ಹರ್ಮನ್‌ಪ್ರೀತ್ ಕೌರ್*
12 – ಮಿಥಾಲಿ ರಾಜ್
8 – ಶಫಾಲಿ ವರ್ಮಾ
8 – ಸ್ಮೃತಿ ಮಂಧಾನ

Share.
Leave A Reply