ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಆಗುತ್ತೆ ನೋಡಿ ಅಂತಿದ್ದ ಸಚಿವ ರಾಜಣ್ಣ ಈಗ ದಿಢೀರ್‌ ರಾಜೀನಾಮೆ ನೀಡಿ ಎಲ್ಲರಿಗೂ ಶಾಕ್‌ ನೀಡಿದ್ದಾರೆ. ಹೈಕಮ್ಯಾಂಡ್ ಸೂಚನೆ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಲೋಪದೋಷವಾಗಿರುವ ಬಗ್ಗೆ ಕೆ.ಎನ್.ರಾಜಣ್ಣ ಮಾತನಾಡಿದ್ದರು.

2024ರ ಲೋಕಸಭಾ ಚುನಾವಣೆ ನಡೆದಾಗ, ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇತ್ತು. ನಾವೇ ಮತದಾರರ ಪಟ್ಟಿಯ ಬಗ್ಗೆ ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ನಮ್ಮ ತಪ್ಪು ಕೂಡ ಇದೆ. ವೋಟಿಂಗ್ ಲಿಸ್ಟ್ ತಯಾರಾಗಿದ್ದೇ ನಮ್ಮ ಸರ್ಕಾರದ ಅವಧಿಯಲ್ಲಿ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರೋದು ನಿಜ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಮಹದೇವಪುರ ಅಸೆಂಬ್ಲಿಯಲ್ಲಿ ನಮ್ಮ ಲೋಪ ಕೂಡ ಇದೆ. ಲೋಕಸಭೆ ಚುನಾವಣೆ ವೇಳೆ ನಾವೇ ಅಧಿಕಾರದಲ್ಲಿದ್ದೇವು ಅಂತಾ ಕೆ. ಎನ್.ರಾಜಣ್ಣ ಮಾತನಾಡಿದ್ದರು.

ಕೆ.ಎನ್. ರಾಜಣ್ಣ ಅವರ ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ರಾಜಣ್ಣ ಹೇಳಿಕೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಇದು ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾದ ಮಾತು. ಮತದಾರರ ಪಟ್ಟಿಯಲ್ಲಿ ಆಕ್ರಮ ಎಸಗಿರೋದು ಚುನಾವಣಾ ಆಯೋಗ. ಬಿಜೆಪಿ ಪಕ್ಷಕ್ಕೆ ಅನುಕೂಲ ಮಾಡಿಕೊಡಲು, ಬಿಜೆಪಿ ಜೊತೆ ಶಾಮೀಲಾಗಿ ಚುನಾವಣಾ ಆಯೋಗ ಅಕ್ರಮ ಎಸಗಿದೆ.

ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಟಾರ್ಗೆಟ್ ಮಾಡಿ ದೆಹಲಿಯಿಂದ ಹಳ್ಳಿಯವರೆಗೂ ಕ್ಯಾಂಪನೇ ಮಾಡುವಾಗ ನಮ್ಮ ಪಕ್ಷದ ನಾಯಕರೇ, ರಾಹುಲ್ ಗಾಂಧಿ ನಿಲುವಿಗೆ ವಿರುದ್ಧವಾಗಿ ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಕೆ.ಎನ್‌.ರಾಜಣ್ಣರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಿರಿ ಅಂತಾ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮ್ಯಾಂಡ್ ಸೂಚಿಸಿತ್ತು. ಜೊತೆಗೆ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ಕಾಂಗ್ರೆಸ್‌ನಿಂದಲೂ ಈ ಬಗ್ಗೆ ವರದಿ ಪಡೆದುಕೊಂಡಿದೆ. ರಾಜ್ಯ ಕಾಂಗ್ರೆಸ್ ವರದಿ ನೀಡಿದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿದ್ದರು.

Share.
Leave A Reply