Site icon BosstvKannada

ಅನುಮಾನಾಸ್ಪದ ರೀತಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಶವ ಪತ್ತೆ

ರಾಮನಗರ: ಅನುಮಾನಾಸ್ಪದ ರೀತಿಯಲ್ಲಿ ಹೆಡ್ ಕಾನ್ಸ್‌ ಟೇಬಲ್ (Head Constable) ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಲಕ್ಷ್ಮಣ್ (51) ಎಂಬುವವರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಲಕ್ಷ್ಮಣ್ ಸೋಮವಾರ ಕರ್ತವ್ಯಕ್ಕೆ ಗೈರಾಗಿದ್ದರು. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು ಎನ್ನಲಾಗಿದೆ. ಹೆಲ್ಮೆಟ್ ಸಮೇತ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳ ವ್ಯಕ್ತವಾಗುತ್ತಿವೆ.

ಇಂದು ಬೆಳಗ್ಗೆ ಶವ ಪತ್ತೆಯಾಗಿದ್ದು, ಕೆರೆಯ ಪಕ್ಕದಲ್ಲಿ ಬೈಕ್ ಕೂಡ ಪತ್ತೆಯಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.

Exit mobile version