ಕರ್ನಾಟಕದಲ್ಲಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಅದ್ರಲ್ಲೂ ಯುವಕ ಯುವತಿಯರು ಹಾರ್ಟ್ ಅಟ್ಯಾಕ್‌ಗೆ ಬಲಿಯಾಗ್ತಿರೋದು ಬೆಚ್ಚಿಬೀಳಿಸುವಂತಿದೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ವರದಿ ಪ್ರಕಾರ ರಾಜ್ಯದಲ್ಲಿ ಪ್ರತಿದಿನ 3 ರಿಂದ 4 ಜನರು ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಪ್ರತಿ ತಿಂಗಳು ಸರಾಸರಿ 100 ರಿಂದ 120 ಜನರು ಹಾರ್ಟ್ ಅಟ್ಯಾಕ್‌ಗೆ ಬಲಿಯಾಗ್ತಿದ್ದಾರೆ.
ಇದರಲ್ಲಿ ಹಾಸನ ಜಿಲ್ಲೆಯಿಂದ ಮೈಸೂರಿಗೆ ಚಿಕಿತ್ಸೆಗಾಗಿ ಬರುವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. ಕಳೆದ ಒಂದೂವರೆ ತಿಂಗಳಲ್ಲಿ ಹಾಸನದಲ್ಲಿ 21 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಂದೂವರೆ ತಿಂಗಳ ಬಾಣಂತಿ, ೨ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸೇರಿದಂತೆ ಹಲವರು ಹಾರ್ಟ್ ಅಟ್ಯಾಕ್‌ನಿಂದಾಗಿ ಜೀವ ಕಳೆದುಕೊಂಡಿದ್ದಾರೆ. ಇನ್ನು ಹಾಸನದಲ್ಲಿ ಹಾರ್ಟ್ ಅಟ್ಯಾಕ್‌ನಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
