ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ಬೆಂಗಳೂರು ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ನಿಧಾನಗತಿಯ ಸಂಚಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಜೋರು ಮಳೆ ಸುರಿದಿದೆ.

ನಾಗರಬಾವಿ, ಮೈಸೂರು ರಸ್ತೆ, ಆರ್​​ಆರ್​ ನಗರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಮಳೆ ಪರಿಣಾಮ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು. ಜೋರು ಮಳೆ ಹಿನ್ನಲೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ನಿಧಾನಗತಿಯಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್​ ಮಾಡಿದ್ದಾರೆ.

Share.
Leave A Reply