BosstvKannada

ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೃಹ ಸಚಿವ ಪರಮೇಶ್ವರ್‌

ರಾಜ್ಯಸರ್ಕಾರದ ಗೃಹಸಚಿವರಾದ ಜಿ.ಪರಮೇಶ್ವರ್‌ ಅವರು ಕುಟುಂಬ ಸಮೇತ ವಿಶ್ವಪ್ರಸಿದ್ಧ ತಿರುಪತಿ ತಿರುಮಲ ಸುಕ್ಷೇತ್ರಕ್ಕೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಕುಟುಂಬ ಸಮೇತವಾಗಿ ಭೂ ವೈಕುಂಠ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.

ಇನ್ನು ತಿರುಪತಿ ಸನ್ನಿಧಾನದಲ್ಲಿ ಕುಟುಂಬದೊಂದಿಗೆ ಫೋಟೋಗೆ ಪೋಸ್‌ ನೀಡಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗಿನ ಅವರ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

Exit mobile version