Site icon BosstvKannada

ಬೆಂಕಿಗೆ ಆಹುತಿಯಾದ ಹೋಟೆಲ್

ವಿಜಯಪುರ: ಹೋಟೆಲ್(Hotel) ವೊಂದು ಬೆಂಕಿಗೆ(Fire Incident) ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಈ ಘಟನೆ ವಿಜಯಪುರ (Vijayapura) ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ. ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Exit mobile version