ಚಿತ್ರದುರ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು 2 ತಿಂಗಳ ಗರ್ಭಿಣಿ (Pregnant Woman) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಟಿಹಳ್ಳಿ (Katihalli) ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ಆತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್ ಕಾರ್ಮಿಕನಾಗಿದ್ದ. ಆತ್ಮಹತ್ಯೆ ಮಾಡಿಕೊಂಡಿರುವ ಪುಷ್ಪ ಕೂಡ ಗಾರ್ಮೆಂಟ್ಸ್ ಗೆ ತೆರಳುತ್ತಿದ್ದರು. ಈ ಮಧ್ಯೆ ಇಬ್ಬರ ಮಧ್ಯೆ ಪ್ರೀತಿ ಹುಟ್ಟಿದೆ. ಅನ್ಯಜಾತಿ ಎಂಬ ಕಾರಣಕ್ಕೆ ಹರೀಶ್ ಹಾಗೂ ಪುಷ್ಪ ಪೋಷಕರು ಮದುವೆಗೆ ವಿರೋಧಿಸಿದ್ದರು. ಪೋಷಕರ ವಿರೋಧದ ಮಧ್ಯೆಯೂ ಇಬ್ಬರೂ ಮದುವೆಯಾಗಿದ್ದರು.
ಪುಷ್ಪ ಹಾಗೂ ಹರೀಶ್‌ಗೆ ಒಂದೂವರೆ ವರ್ಷದ ಒಂದು ಮದ್ದಾದ ಗಂಡು ಮಗುವಿದೆ. ಆದರೆ, ಈ ಮಧ್ಯೆ ಇಬ್ಬರ ಮಧ್ಯೆ ಸಣ್ಣಪುಟ್ಟ ಜಗಳವಾಗುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗ ರಾಜಿಸಂಧಾನದೊಂದಿಗೆ ಮನೆಗೆ ತೆರಳಿದ್ದ ಪುಷ್ಪ ನೇಣಿಗೆ ಶರಣಾಗಿದ್ದಾಳೆ. ಅಸ್ವಸ್ಥಳಾಗಿದ್ದ ಪುಷ್ಪಾರನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಹರೀಶನೇ ಈ ಕೃತ್ಯವೆಸಗಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾನೆಂದು ಪುಷ್ಪ ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
