BosstvKannada

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿ, ನ್ಯಾ. ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ. ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಇತರೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version