ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದೆ. ಕಲಬುರಗಿ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಬಗ್ಗೆ ಮಾತನಾಡಿದರು. ಹೈದರಾಬಾದ್‌ ನಿಜಾಮನ ದಬ್ಬಾಳಿಕೆ, ಹಾಗೂ ರಜಾಕಾರರ ಅಟ್ಟಹಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸರ್ದಾರ್‌ ಪಟೇಲರ ಸೈನಿಕ ನೀತಿಯನ್ನ ಹಾಡಿ ಹೊಗಳಿದರು. ಇದರ ಜೊತೆಗೆ ಕೆಕೆಆರ್​ಡಿಬಿಗೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿದ್ದು, ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 350 ಕೆಪಿಎಸ್ ಶಾಲೆ ನಿರ್ಮಾಣ,7 ಜಿಲ್ಲೆಗಳಲ್ಲಿ 204 ಕೋಟಿ ರೂ ವೆಚ್ಚದಲ್ಲಿ ವಸತಿ ನಿಲಯಗಳು, ಜಿಲ್ಲೆಯಲ್ಲಿ 2,515 ಅಂಗನವಾಡಿ ಕಟ್ಟಡ ನಿರ್ಮಾಣ, ಕಲಬುರಗಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ 220 ಕೋಟಿ ರೂ. ನೀಡುವುದರ ಜೊತೆಗೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಇದರ ಜೊತೆಯಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್​ಡಿಬಿ ಹಾಟ್೯ ಲೈನ್​​ಗೆ ಚಾಲನೆ‌ ನೀಡುವುದಾಗಿ ಹೇಳಿದರು. ಇದೇ ವೇಳೆ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಸರ್ಕಾರ ಪಣ ತೊಟ್ಟಿದೆ ಎಂದು ಹೇಳಿದರು.

Read Also : ಕಾಂಗ್ರೆಸ್‌ಗೆ ಬಿಗ್ ಶಾಕ್ : ಕೆ.ವೈ.ನಂಜೇಗೌಡ MLA​ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್

Share.
Leave A Reply