Site icon BosstvKannada

100 FIR ದಾಖಲಿಸಿದರೂ ನಾನು ಹೆದರಲ್ಲ, ನನ್ನ ರಕ್ತ ಪ್ಯೂರ್ ಹಿಂದುತ್ವ ಬೆರಕೆ ಅಲ್ಲ : ಸಿ.ಟಿ ರವಿ

ಮಂಡ್ಯದ ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಎಮ್‌ಎಲ್‌ಸಿ ಸಿಟಿ ರವಿ, ನಮ್ಮ ಸಹನೆಗೂ ಒಂದು ಮಿತಿ ಇದೆ. ನೀವು ನನ್ನ ಮೇಲೆ 100 ಎಫ್ ಐಆರ್ ದಾಖಲಿಸಿದರೂ ನಾನು ಹೆದರಲ್ಲ. ಎಲ್ಲವನ್ನೂ ಎದುರಿಸುತ್ತೇನೆ ಎಂದಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ನನ್ನ ರಕ್ತ ಪ್ಯೂರ್ ಹಿಂದುತ್ವ ಬೆರಕೆ ಅಲ್ಲ ಎಂದು ತಿರುಗೇಟು ನೀಡಿದ್ದಾರೆ. ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ನೀವು ಕಲ್ಲು ಹೊಡೆದು, ತೊಡೆ ತಟ್ಟಿ, ಪೆಟ್ರೋಲ್ ಬಾಂಬ್ ಹಾಕಿದ್ರೆ, ಸಹಿಸುವ ಕಾಲ ಮುಗಿದಿದೆ ಎಂದಿದ್ದೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ, ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು ಎಂದಿದ್ದೆ.

ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ. ಶಿವನ ನೆಲದಲ್ಲಿ ಅಲ್ಲಾ ಒಬ್ಬನೇ ಅಂತ ಅಂದ್ರೆ ಉಳಿದ ದೇವರ ಅಸ್ತಿತ್ವ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಕೆಲವರು ನಾನು ಹಿಂದೂ ಅಂತಾರೆ, ನಾಮ ಹಾಕ್ಕೊಂಡ್, ನಾಮ ಅಳಿಸಿ ಟೋಪಿ ಹಾಕಿ ನಮಾಜ್ ಮಾಡೋದು. ಇಂತಹ ತಾರಾತಕಡಿ, ನಾಟಕದ ಜಾಯಮಾನದವನು ನಾನಲ್ಲ. ನನ್ನ ರಕ್ತ ಪ್ಯೂರ್ ಹಿಂದುತ್ವ, ಬೆರಕೆ ಅಲ್ಲ ಅಂತ ʻಕೈʼ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Read Also : ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ : ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

Exit mobile version