Site icon BosstvKannada

ಬರೀ ಭಾಷಣ ಮಾಡಿಲ್ಲ, ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ: ಡಿಸಿಎಂ ಡಿಕೆಶಿ

ಬೆಂಗಳೂರು: ನಾನು ಬರೀ ಭಾಷಣ ಮಾಡುತ್ತ ಸುತ್ತಾಡಿಲ್ಲ. ಕಾರ್ಯಕರ್ತನಾಗಿ ನೆಲ ಗೂಡಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಭೇಟಿ ಮಾಡಿದ ನಂತರ ಮಾತನಾಡಿದ ಅವರು, ನಾನು ಮುಂದೆಯೂ ಪಕ್ಷದ ಕಾರ್ಯಕರ್ತನಾಗಿಯೇ ಉಳಿಯಲು ಇಷ್ಟ ಪಡುತ್ತೇನೆ. ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ ಎಂದಿದ್ದಾರೆ.

ಖರ್ಗೆ ಅವರ ಜತೆ ನಾಯಕತ್ವದ ಬಗ್ಗೆ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು‌. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗಿತ್ತಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಈಗ ಕೇಂದ್ರ ಸರ್ಕಾರವೇ ಜಿಲ್ಲೆಯಲ್ಲಿ ತೆಗೆದುಕೊಳ್ಳುವ ಕೆಲಸಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದಿದ್ದಾರೆ.

Exit mobile version