Site icon BosstvKannada

ನಾನೇ ಐದು ವರ್ಷ ಸಿಎಂ ಆಗಿರ್ತೀನಿ, ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದರಾಮಯ್ಯ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಬಗ್ಗೆ ಪದೇ ಪದೇ ಚರ್ಚೆ ಮುನ್ನೆಲೆಗೆ ಬರುತ್ತಿರುವ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ‘ನಾನೇ ಐದು ವರ್ಷ ಸಿಎಂ ಆಗಿರ್ತೀನಿ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  2.5 ವರ್ಷ ಆಗಿರುವುದರಿಂದ ಸ್ವಾಭಾವಿಕವಾಗಿ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇದೆಯಾ..? ಸುಖಾ ಸುಮ್ಮನೆ ಊಹಾಪೋಹಗಳು ಹರಿದಾಡುತ್ತಿವೆ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ನಾವು ಬದ್ದ ಎಂದಿದ್ದೇವೆ. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಒಂದಿಬ್ಬರು ಶಾಸಕರು ಹೇಳುತ್ತಿದ್ದಾರೆ. ನನಗೂ ಸಿದ್ದರಾಮಯ್ಯ ಮುಂದುವರೆಯಲಿ ಎಂದು ಶಾಸಕರು ಹೇಳುತ್ತಿದ್ದಾರೆ. ಇದು ಪಕ್ಷದ ನಿರ್ಧಾರ ಅಲ್ಲ ವೈಯಕ್ತಿಕ. ಕೆಲ ಡಿಕೆಶಿ ಬೆಂಬಲಿಗರು ಅಭಿಮಾನದಿಂದ ಸಿಎಂ ಆಗಲಿ ಎಂದು ಹೇಳುತ್ತಾರೆ ಎಂದರು.

ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಾಯಕತ್ವ ವಿಚಾರವಾಗಿ ಮಾಡುತ್ತಿರುವ ಸಭೆ ಅಲ್ಲ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಈಗಾಗಲೇ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.  ಏನೇ ತೀರ್ಮಾನ ಮಾಡಿದ್ರೂ ಒಪ್ಪಬೇಕೆಂದು ಹೈಕಮಾಂಡ್ ಹೇಳಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ದ ಎಂದರು.

Exit mobile version