BosstvKannada

ನಾನು ತಪ್ಪೇ ಮಾಡಿಲ್ಲ, ಕ್ಷಮೆ ಕೇಳಲ್ಲ.. ಕನ್ನಡಿಗರಿಗೆ ಕ್ಷಮೆ ಕೇಳಲು ನಿರಾಕರಿಸಿದ Kamal

ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆಗೆ ಕರುನಾಡು ಕೆಂಡಾಮಂಡಲಗೊಂಡಿದೆ. ಕಳೆದ 2 ದಿನಗಳಿಂದ Kamal Haasan ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅದಷ್ಟೇ ಅಲ್ಲ, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲದಿದ್ರೆ ‘ಥಗ್ ಲೈಫ್’ ಸಿನಿಮಾಗೆ ತಡೆ ನೀಡೋದಾಗಿ ಅವರ ಚಿತ್ರಗಳನ್ನು ಬ್ಯಾನ್ ಮಾಡೋ ದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವೆಡೆ ಕನ್ನಡಪರ ಸಂಘಟನೆಗಳ ಕಾರ್ಯ ಕರ್ತರು ನಟ ಕಮಲ್ ವಿರುದ್ಧ ಪ್ರತಿಭಟನೆ ನಡೆಸಿ ನಟ ಕ್ಷಮೆ ಕೋರಬೇಕು ಎಂದು ಎಚ್ಚರಿಸಿದೆ.

ಆದ್ರೆ ಕನ್ನಡಿಗರ ತೀವ್ರ ಆಕ್ರೋಶದ ಬಳಿಕವೂ ನಟ ಕಮಲ್ ಹಾಸನ್ ಅವರು ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಚೆನ್ನೈನಲ್ಲಿ ಇಂದು ಮಾತನಾಡಿದ ಕಮಲ್ ಹಾಸನ್, ನಾನು ಕ್ಷಮೆ ಕೇಳಲ್ಲ. ನಾನು ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Also Read: kamal haasan controversy : ಕಮಲ್‌ ಪರ ಬ್ಯಾಟ್‌ ಬೀಸಿದ ಪದ್ಮಾವತಿಗೆ ಚಳಿಬಿಡಿಸಿ ನೆಟ್ಟಿಗರು

ಈ ಕನ್ನಡ ಭಾಷಾ ವಿವಾದದಲ್ಲಿ ಸುದ್ದಿಯಾಗಿರುವ ನಟ ಕಮಲ್ ಹಾಸನ್ ಅವರು ಇದೇ ವೇಳೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಇಂದು ಸಿಎಂ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ. ನಾನು ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳವನ್ನು ನಿಜವಾಗಲೂ ಪ್ರೀತಿಸುತ್ತೇನೆ. ನಾನು ಏನಾಂದ್ರು ತಪ್ಪು ಮಾಡಿದ್ರೆ ಕ್ಷಮೆ ಕೇಳುತ್ತೇನೆ. ನಾನು ತಪ್ಪೇ ಮಾಡಿಲ್ಲ. ಬೆದರಿಕೆಗಳಿಂದ ನಾನು ತಬ್ಬಿಬ್ಬು ಆಗಿಲ್ಲ. ತಮ್ಮ ಹೇಳಿಕೆಯಿಂದ ಹಿಂದೆ ಸರಿಯಲು, ಕರ್ನಾಟಕ, ಕನ್ನಡಿಗರ ಕ್ಷಮೆ ಕೇಳಲು ಕಮಲ್ ಹಾಸನ್ ಅವರು ನಿರಾಕರಿಸಿದ್ದಾರೆ.

Exit mobile version