ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ನನಗೂ ಬಿಕ್ಕು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ದೂರು ಕೊಟ್ಟರೂ ಎಫ್ ಐಆರ್ ದಾಖಲಿಸಬಹುದಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.

ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ನನ್ನ ಕುರಿತು ಈ ರೀತಿ ಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನಗೆ ಕೇಳದೆ ನನ್ನ ಮೇಲೆ ಪೊಲೀಸರು ಎಫ್‌ಐಆರ್ ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರಾ? ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

Share.
Leave A Reply