Site icon BosstvKannada

ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ : ಡಿಕೆಶಿ ತಿರುಗೇಟು

“ನನ್ನ ಬಳಿ ಇರುವ ದುಬಾರಿ ವಾಚ್ ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೇನು ಗೊತ್ತು? ನನ್ನ ಅಫಿಡವಿಟ್ ನನಗೆ ಗೊತ್ತು, ಕಾಸು ಕೊಟ್ಟಿರುವುದು ನಾನು, ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ” ಎಂದು ಹೇಳಿದರು. ಇದು ಕದ್ದಿರುವ ವಾಚಾ ಎಂದು ನಾರಾಯಣಸ್ವಾಮಿ ಅವರು ಕೇಳಿರುವ ಬಗ್ಗೆ ಹೇಳಿದಾಗ, “ಹೌದು, ನಾನು ಅವರ ಮನೆಯಿಂದಲೇ ಕದ್ದಿದ್ದೇನೆ” ಎಂದು ಛೇಡಿಸಿದರು.

Exit mobile version