Site icon BosstvKannada

ಮಸೀದಿ ಉತ್ಖನನ ವೇಳೆ ರಾಮ, ಸೀತಾ ವಿಗ್ರಹ ಪತ್ತೆ!

ಮಸೀದಿಯೊಂದರ ಉತ್ಖನನ ವೇಳೆ ರಾಮ ಹಾಗೂ ಸೀತಾ ವಿಗ್ರಹ ಪತ್ತೆಯಾಗಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ.

ಈ ಘಟನೆ ಮಧ್ಯಪ್ರದೇಶದ (Madhya Pradesh) ಸಾಗರ್ ಎಂಬಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಂಸ್ಕೃತ ಬಚಾವೋ ಮಂಚ್ ನ ನಾಯಕರೊಬ್ಬರು ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಮುಖಂಡರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸ್ಥಳದಲ್ಲಿ ಹಿಂದೆ ಹಿಂದೂ ದೇವಾಲಯವಿತ್ತು. ಆನಂತರ ಅದನ್ನು ಮುಸ್ಲಿಂ ಸಮುದಾಯದವರು ವಶಪಡಿಸಿಕೊಂಡಿರಬಹುದು. ಹೀಗಾಗಿ ಈ ಸ್ಥಳದಲ್ಲಿ ಮತ್ತೆ ಹಿಂದೂ ದೇವಾಲಯವನ್ನು ನಿರ್ಮಿಸಬೇಕು ಎಂದು ಹಿಂದೂ ಮುಖಂಡರು ಆಗ್ರಹಿಸುತ್ತಿದ್ದಾರೆ.

ಹಿಂದೂ ಮುಖಂಡರು ಹಾಗೂ ಜನರು ಸ್ಥಳಕ್ಕೆ ಆಗಮಿಸಿ ದೇವಸ್ಥಾನ ನಿರ್ಮಿಸಬೇಕೆಂದು ಆಗ್ರಹಿಸುತ್ತಿದ್ದಂತೆ ಮುಸ್ಲಿಂ ಸಮುದಾಯದವರು ಕೂಡ ಸ್ಥಳಕ್ಕೆ ಆಗಮಿಸಿದ್ದರು. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇದಿಕೆ ತೆಗೆಯುವಂತೆ ಮುಸ್ಲಿಂರು ಆಗ್ರಹಿಸುತ್ತಿದ್ದು, ಸ್ಥಳದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದು, ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೂಡ ಚರ್ಚೆ ನಡೆಯುತ್ತಿದೆ.

Exit mobile version