ಸದ್ಯ ರಾಜ್ಯ ರಾಜಕೀಯದಲ್ಲಿ ಶಾಸಕ ಬಿ ಕೆ ಸಂಗಮೇಶ್ ಅವರ ಹೇಳಿಕೆ ರಾಜ್ಯ ರಾಜಕೀಯ ಭಾರೀ ಸಂಚಲನ ಸೃಷ್ಟಿಸಿದೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎನ್ನುವ ಮೂಲಕ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ತಮ್ಮ ಇಸ್ಲಾಂ ಬಗೆಗಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಈದ್‌ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಜನರು 4 ಬಾರಿ ಗೆಲ್ಲಿಸಿದ್ದಾರೆ. ನಾನು ಎಂದಿಗೂ ನಿಮ್ಮ ಮನೆಮಗನಾಗಿರುತ್ತೇನೆ. ಮುಂದಿನ ಜನ್ಮ ಅಂತ ಇದ್ರೆ ನಾನು ಮುಸ್ಲಿಂ ಆಗಿಯೇ ಹುಟ್ಟಬೇಕು ಎಂದಿದ್ದಾರೆ. ಇದೇ ವೇಳೆ ತಮ್ಮ ಪುತ್ರ ಗಣೇಶನ ಮೇಲೆಯೂ ನಿಮ್ಮ ಆಶೀರ್ವಾದ ಇರಲಿ ಎನ್ನುವ ಮೂಲಕ ಮುಂದಿನ ಚುನಾವಣೆಯಲ್ಲಿ ಪುತ್ರನನ್ನು ಭದ್ರಾವತಿಯಲ್ಲಿ ಕಣಕ್ಕಿಳಿಸುವ ಸುಳಿವನ್ನು ಸಹ ನೀಡಿದ್ದಾರೆ.
Read Also : ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ – ಸಿಎಂ ಸಿದ್ದರಾಮಯ್ಯ

