Site icon BosstvKannada

ನನಗೆ ಮಾತಾಡೋ ಚಪಲ, ಅವರಿಗೆ ಲೂಟಿ ಚಪಲ: ಕುಮಾರಸ್ವಾಮಿ ಹೀಗೆ ಅಂದಿದ್ದು ಯಾರಿಗೆ?

ರಾಮನಗರ: ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಡಿಕೆಶಿ ತಮ್ಮ ಮೊನ್ನೆ ಏನೋ ಹೇಳವ್ನೆ, ನಮಗೆ ಮಾತನಾಡುವ ಚಪಲ ಅಂದವ್ನೆ’ ಹೌದು..ನನಗೆ ಮಾತಾಡುವ ಚಪಲ. ಅವನಿಗೆ ಲೂಟಿ ಚಪಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನನ್ನನ್ನು ರಾಮನಗರದಿಂದ ಯಾರೂ ಓಡಿಸಲು ಆಗಲ್ಲ. 2028ಕ್ಕೆ ಗೆದ್ದು ನಿಜವಾದ ರಾಮರಾಜ್ಯ ತರುತ್ತೇನೆ. ನಾನು ಕಲ್ಲುಬಂಡೆ ಒಡೆದು ಜೀವನ ಮಾಡಿಲ್ಲ. ಯಾರ ಜಮೀನನ್ನೂ ಕಬಳಿಸಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, 2018ರಲ್ಲೂ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದಿದ್ದಾರೆ.

Exit mobile version