IMD Alert: ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ನಿರಂತರ ಮಳೆಗೆ ಸಿಟಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಜನ ರೋಸಿ ಹೋಗಿದ್ದಾರೆ. ಇನ್ನು ವೀಕೆಂಡ್‌ನಲ್ಲಿ ಎಲ್ಲಾದ್ರೂ ಟ್ರಿಪ್ ಹೋಗೋ ಪ್ಲ್ಯಾನ್ ಇದ್ರೆ ಅಥವಾ ಇಂಪಾರ್ಟೆಂಟ್ ಕೆಲ್ಸ ಏನಾದ್ರೂ ಇಟ್ಕೊಂಡಿದ್ರೆ ಅದನ್ನ ಪೋಸ್ಟ್‌ಪೋನ್ ಮಾಡ್ಕೊಳ್ಳೋದು ಒಳ್ಳೇದು.
IMD Alert: ಯಾಕಂದ್ರೆ, ಈ ವೀಕೆಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಿದ್ರೆ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅನ್ನೋದ್ರ ಬಗ್ಗೆ ಇಲ್ಲಿದೆ ಡಿಟೇಲ್ಸ್. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ನಾಳೆಯಿಂದ ಒಂದೆರಡು ದಿನ ಮಳೆಯ ತೀವ್ರತೆ ಕಡಿಮೆಯಾಗುತ್ತೆ.
ಆದ್ರೆ ವೀಕೆಂಡ್‌ನಲ್ಲಿ ಮತ್ತೆ ಜಾಸ್ತಿಯಾಗುವ ಸಾಧ್ಯತೆ ಇದೆ. ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ 24ನೇ ತಾರೀಖಿನಿಂದ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರದ ಮೋಡಗಳಿಂದ ಮಳೆಯಾಗ್ತಾ ಇದ್ರೆ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಬಂಗಾಳ ಕೊಲ್ಲಿಯ ಭಾಗದಿಂದ ಮೋಡಗಳು ಪಶ್ಚಿಮಕ್ಕೆ ಸೆಳೆಯಲ್ಪಡ್ತಾ ಇರೋದ್ರಿಂದ ಮಳೆಯಾಗ್ತಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಕಂಟಕ ಶುರುವಾಗಿದೆ.
Also Read: ಕೋರ್ಟ್‌ನಲ್ಲಿ Darshan Pavithra ಕೈ ಹಿಡಿದು ಬಂದ್ರಾ?
ಮಳೆಯ ಆರ್ಭಟಕ್ಕೆ ಕರ್ನಾಟಕ ಅಕ್ಷರಶಃ ನಲುಗಿ ಹೋಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ. 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಇನ್ನೆರಡುದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತಾಪಮಾನದಲ್ಲಿ ಗಣನೀಯ ಕುಸಿತವಾಗಲಿದೆ.
ಮೇ25 ರ ವರೆಗೆ ವರುಣನ ಆರ್ಭಟ ಮುಂದುವರೆಯಲಿದೆ. ಮೇ 22 ರಂದು ವಾಯುಭಾರ ಕುಸಿತ ಆಗಲಿದ್ದು ಪರಿಣಾಮ ಬೆಂಗಳೂರಲ್ಲಿ ಮುಂದಿನ ಎರಡು ದಿನವೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ತಾಪಮಾನ 27°C ಮತ್ತು 20°C ಆಗುವ ಸಾಧ್ಯತೆ ಇದೆ.ಈಗಾಗಲೇ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುತ್ತಿದ್ದು, ಈ ಮಳೆ ಇನ್ನಷ್ಟು ಸಂಕಷ್ಟ ತರುವ ಸಾಧ್ಯತೆ ಇದೆ..

