ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.
ಬೆಂಗಳೂರಿನಲ್ಲೂ ನಿನ್ನೆ ರಾತ್ರಿ ಸುರಿದ ಮಳೆಯಿಂದ ಇಂದು ಮುಂಜಾನೆಯಿಂದಲೇ ತಂಪಾದ ವಾತಾವರಣ ಇದೆ. ಇಂದು ಕೂಡ ರಾಜಧಾನಿಯಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ಬದಲಾವಣೆಯಿಂದಾಗಿ, ದಕ್ಷಿಣ ಭಾರತದಲ್ಲಿ ಮಾನ್ಸೂನ್ ಗಣನೀಯವಾಗಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಹವಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಇನ್ನು ಕಲಬುರಗಿ, ಬೀದರ್, ಬೆಳಗಾವಿ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಅಂತಾ ಐಎಂಡಿ ಮುನ್ಸೂಚನೆ ನೀಡಿದೆ.
