Advertisement

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್(Karnataka High Court) ಮಹತ್ವದ ತೀರ್ಪು ನೀಡಿದೆ.

ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ಸೇವೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗ. ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಹೇಳಿದೆ. ಕೋರ್ಟ್ ತೀರ್ಪಿನಿಂದ ಸಾಮಾನ್ಯ ಜನರು ಹಾಗೂ ಬೈಕ್ ಟ್ಯಾಕ್ಸಿ ಮೂಲಕ ಬದುಕು ಕಟ್ಟಿಕೊಳ್ಳಬೇಕೆಂದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ಇನ್ನು ಮುಂದೆ ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಹಾಗೂ ಸುಲಭ ಸಾರಿಗೆ ಸೌಲಭ್ಯ ಲಭ್ಯವಾಗಲಿದೆ ಎಂಬ ನಿರೀಕ್ಷೆ ಇದೆ.

Share.
Leave A Reply