ಭಾರತ ಕ್ರಿಕೆಟ್(India Cricket) ತಂಡಕ್ಕೆ ಚಾಂಪಿಯನ್ಸ್ ಟ್ರೋಫಿಗೆ (Champions Trophy) ಮುಂಚಿತವಾಗಿ ಬ್ಯಾಡ್ ನ್ಯೂಸ್ ಸಿಕ್ಕಿದೆ. ಒಂದು ಕಡೆ ಚಾಂಪಿಯನ್ಸ್ ಟ್ರೋಫಿಗೆ(Champions Trophy) ಬುಮ್ರಾ(Bumrah) ಅಲಭ್ಯರಾಗುವ ಎಲ್ಲಾ ಲಕ್ಷಣ ಕಾಣ್ತಿದೆ… ಮತ್ತೊಂದು ಕಡೆ ನಾಯಕ ಸ್ಥಾನದಿಂದ ರೋಹಿತ್ ಕೆಳಗಿಳಿಯುವ ಮುನ್ಸೂಚನೆ ಕೊಟ್ಟಿದ್ದಾರೆ..


ರೋಹಿತ್ ಶರ್ಮಾ (Rohit Sharma)ಮುಂದಿನ ಕೆಲವು ತಿಂಗಳುಗಳ ಕಾಲ ಮಾತ್ರ ಭಾರತ ತಂಡದ ನಾಯಕತ್ವದಲ್ಲಿ ಮುಂದುವರಿಯುವ ಬಯಕೆಯನ್ನು ಬಿಸಿಸಿಐ ಮುಂದೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹೊಸ ನಾಯಕನ ಹುಡುಕಾಟವನ್ನು ಮುಂದುವರಿಸುವಂತೆಯೂ ಬಿಸಿಸಿಐಯನ್ನು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಿಸಿಸಿಐ ಜೊತೆಗಿನ ಸಭೆಯಲ್ಲಿ, ರೋಹಿತ್ ಶರ್ಮಾ(Rohit Sharma) ಸ್ಥಾನವನ್ನು ಬುಮ್ರಾ ಅವರಿಗೆ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆಯಂತೆ.
ಭಾರತದ ಟೆಸ್ಟ್ ನಾಯಕರಾಗಿ ರೋಹಿತ್ ಶರ್ಮಾ ಬದಲಿಗೆ ಯಾರು ಎಂದು ಕೇಳಿದರೆ ಆ ಸಾಲಿನಲ್ಲಿ ಜಸ್ಪ್ರೀತ್ ಬುಮ್ರಾ (Bumrah) ಮುಂಚೂಣಿಯಲ್ಲಿದ್ದಾರೆ. ಆದರೆ ಅವರ ಫಿಟ್ನೆಸ್ ಕಾಳಜಿಯನ್ನು ಪರಿಗಣಿಸಿ, ಅವರು ದೀರ್ಘಾವಧಿಯ ಆಯ್ಕೆಯಾಗಿ ಕಂಡುಬರುವುದಿಲ್ಲ. ಇತ್ತೀಚಿನ ಬೆನ್ನು ನೋವಿನ ಸಮಸ್ಯೆಯಿಂದಾಗಿ, ಅವರು ಮುಂದೆ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ. ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನ. ಹಾಗಾಗಿ ಟೆಸ್ಟ್ ಪಂದ್ಯಗಳಲ್ಲಿ ಅವರನ್ನು ಖಾಯಂ ನಾಯಕ ಎಂದು ಪರಿಗಣಿಸಬಹುದೇ ಎನ್ನುವ ಪ್ರಶ್ನೆ ಬಿಸಿಸಿಐ ಮುಂದಿದೆ.
ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಳೆದುಕೊಂಡಿರುವ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಹೊರಬಿದ್ದಿದೆ. ಭಾರತ ಪ್ರಸ್ತುತ ಐಸಿಸಿ ಚಾಂಪಿಯನ್ಸ್ ಟ್ರೋಫಿಯತ್ತ ಗಮನ ಹರಿಸುತ್ತಿದೆ. ಆದರೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡ ಆತಂಕದಲ್ಲಿದೆ. ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಮೆಂಟ್ನಲ್ಲಿ ಭಾರತ ತಂಡವು ತಮ್ಮ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇಲ್ಲದೆ ಹೋಗಬೇಕಾಗಬಹುದು ಎನ್ನುವಂತಾಗಿದೆ.


ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡುವಾಗ ಬುಮ್ರಾ ಗಾಯಗೊಂಡಿದ್ದರು. ಬಳಿಕ ಬೆನ್ನಿನ ಸ್ಕ್ಯಾನ್ ಕೂಡ ಮಾಡಲಾಗಿತ್ತು. ಅವರು ಎರಡನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಅಂದಿನಿಂದ ಬುಮ್ರಾ ಗಾಯದ ಬಗ್ಗೆ ಎಲ್ಲರೂ ಚಿಂತಿತರಾಗಿದ್ದರು. ಇದರಿಂದಾಗಿ ಚಾಂಪಿಯನ್ಸ್ ಟ್ರೋಫಿಯ(Champions Trophy) ಗುಂಪು ಹಂತಕ್ಕೆ ಬುಮ್ರಾ(Bumrah) ಲಭ್ಯರಿರುವುದಿಲ್ಲ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡರೆ, ಬುಮ್ರಾ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ನಲ್ಲಿ ಆಡಲು ಲಭ್ಯವಿರುತ್ತಾರೆ.