Site icon BosstvKannada

U19 ವಿಶ್ವಕಪ್ ಗೆ ಭಾರತೀಯ ಕ್ರಿಕೆಟ್ ತಂಡ ಘೋಷಣೆ

2026ರ ಜನವರಿಯಲ್ಲಿ ಆರಂಭವಾಗುವ u19 ಟಿ20 ವಿಶ್ವಕಪ್‌ ಗಾಗಿ ಭಾರತ ತಂಡವನ್ನು ಬಿಸಿಸಿಐ ಘೋಷಿಸಿದೆ.

ಹಿರಿಯ ವಿಶ್ವಕಪ್ ಗೂ ಮುನ್ನ U19 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಇಂದು ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆಗೆ ಮತ್ತೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ.

ಜ. 15ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧದ ಗುಂಪು ಪಂದ್ಯದೊಂದಿಗೆ ಭಾರತ ತನ್ನ ಅಭಿಯಾನ ಆರಂಭಿಸಲಿದೆ.
ಭಾರತ ತಂಡ: ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆರನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂಡು, ಹರ್ವಂಶ್ ಸಿಂಗ್, ಆರ್‌ಎಸ್ ಅಂಬರೀಶ್, ಕಾನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಮೊಹಮ್ಮದ್ ಎನಾನ್, ಹೆನಿಲ್ ಪಟೇಲ್, ಡಿ.ದೀಪೇಶ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್ ಸ್ಥಾನ ಪಡೆದಿದ್ದಾರೆ.

Exit mobile version