ಭಾರತೀಯ ರೈಲ್ವೆಯಲ್ಲಿ 3 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಶೇಕಡಾ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ NCVT/SCVT ನೀಡಿದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು. ಇನ್ನು, ಅರ್ಜಿದಾರರ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.
OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಲಾಗುತ್ತದೆ ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗುತ್ತದೆ. ಆಗಸ್ಟ್ 14ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 13ರ ಒಳಗಾಗಿ ಅರ್ಜಿಯನ್ನ ಸಲ್ಲಿಸಬಹುದು. ಈ ಹುದ್ದೆಗಳನ್ನು ಅಪ್ರೆಂಟಿಸ್ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ ಹಾಗೂ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ. ಅಧಿಕೃತ ವೆಬ್‌ಸೈಟ್ rrcer.org ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

