ಐಸಿಸಿ ಮೂರು ಮಾದರಿಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಭಾರತೀಯ ಆಟಗಾರರು ಪಾರುಪತ್ಯ ಮೆರೆದಿದ್ದಾರೆ. ಬರೋಬ್ಬರಿ ಐವರು ಭಾರತೀಯರು ಮೊದಲ ಸ್ಥಾನದಲ್ಲಿದ್ದಾರೆಂದರೆ ನೀವು ನಂಬಲೇಬೇಕು. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ.

ಏಕದಿನ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ ಟಿ 20 ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ವರುಣ್ ಚಕ್ರವರ್ತಿ ನಂ. 1 ಟಿ20 ಬೌಲರ್ ಎನಿಸಿಕೊಂಡಿದ್ದಾರೆ. ಆದರೆ, ಈ ಭಾರತೀಯ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾತ್ರ ಹಿನ್ನಡೆ ಅನುಭವಿಸಿದ್ದಾರೆ.

ಈ ಬಾರಿ ತಮ್ಮ ಕಳಪೆ ಪ್ರದರ್ಶನದಿಂದ ಸೂರ್ಯ ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಿಂದ ಹೊರಬಿದ್ದಿದ್ದಾರೆ.

Share.
Leave A Reply