Site icon BosstvKannada

ಮುಟ್ಟಿನ ರಜೆಗೆ ತಡೆಯಾಜ್ಞೆ!

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ವೇಳೆ ಒಂದು ದಿನ ವೇತನ ಸಹಿತ ರಜೆ ನೀಡುವ ಬಗ್ಗೆ ಸರ್ಕಾರ ಆದೇಶ ನೀಡಿತ್ತು. ಆದರೆ, ಈ ನಿರ್ಧಾರವನ್ನು ಬೆಂಗಳೂರು ಹೋಟೆಲ್‌ ಗಳ ಸಂಘ ವಿರೋಧಿಸಿತ್ತು. ಅಲ್ಲದೇ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸರ್ಕಾರಕ್ಕೆ ಇಂತಹ ನಿಯಮವನ್ನು ವಿಧಿಸಲು ಕಾನೂನು ಅಧಿಕಾರವಿಲ್ಲ ಎಂದು ವಾದಿಸಿತ್ತು.ವಿಚಾರಣೆ ನಡೆಸಿರುವ ಕೋರ್ಟ್, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಸರ್ಕಾರದ ಮುಟ್ಟು ರಜೆಯನ್ನು ಮಹಿಳಾ ಉದ್ಯೋಗಿಗಳು ಸ್ವಾಗತಿಸಿದ್ದರು. ಬಹುತೇಕ ಸಂಸ್ಥೆಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿತ್ತು ಕೂಡ. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ವಿವರವಾದ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೋರಿದೆ. ಅಲ್ಲದೇ, ಚಳಿಗಾಲದ ರಜೆಯ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ಮುಟ್ಟು ರಜೆಗೆ ತಡೆಯಾಜ್ಞೆ ಬಿದ್ದಿದೆ.

ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದ ರಜೆಯಂತೆ ವರ್ಷಕ್ಕೆ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿತ್ತು. ಈಗ ಆದೇಶಕ್ಕೆ ವಿಘ್ನ ಶುರುವಾಗಿದ್ದು, ಮಹಿಳಾ ಉದ್ಯೋಗಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Exit mobile version