SC ಒಳಮೀಸಲಾತಿ ಜಾರಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೇ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ಸಿಎಂ ಡಿಸಿಎಂ ಪ್ರತಿಕೃತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಧರಣಿ ತೀವ್ರ ಸ್ವರೂಪ ಪಡೆದಿದ್ದು, ಮಹಿಳೆಯೂ ಹೈಡ್ರಾಮಾ ಮಾಡಿದ್ದಾಳೆ.

ರಸ್ತೆ ಮಧ್ಯೆದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಆರ್ ಸರ್ಕಲ್ ಕಡೆ ತೆರಳುವ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು , ಬಸ್ ಕಾರುಗಳನ್ನ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ. ಇನ್ನೊಂದೆಡೆ ಪ್ರತಿಭಟನೆ ವೇಳೆ ಸ್ಥಳದಲ್ಲಿ ಯುವಕರು ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ವೀಣಾ ಎಂಬ ಮಹಿಳೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಅವರನ್ನ ರಕ್ಷಣೆ ಮಾಡಿದ್ದಾರೆ.

ನಾಗಮೋಹನ್ ದಾಸ್ ವರದಿಯ ಪ್ರಕಾರ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಹೀಗಾಗಿ ವೈಜ್ಞಾನಿಕ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿವೆ.

Read Also : ನೇಪಾಳದಲ್ಲಿ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Share.
Leave A Reply