ಬೆಂಗಳೂರಿನಲ್ಲಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಸರ್ಕಾರದ ಪವರ್‌ಫುಲ್ ಖಾತೆ ಹೊಂದಿರುವ ಇಂಧನ ಸಚಿವ ಕೆಜೆ ಜಾರ್ಜ್ ಅವರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಸಚಿವ ಜಾರ್ಜ್ ಅವರ ಬ್ಯುಸಿನೆಸ್ ಪಾರ್ಟನರ್‌ಗಳಾದ ಜಿತೇಂದ್ರ ವಿರ್ವಾನಿ ಒಡೆತನದ ಎಂಬೆಸಿ ಗ್ರೂಪ್ ಮತ್ತು ಕೊಠಾರಿ ಎಂಬುವವರಿಗೆ ಸೇರಿದ ಕಚೇರಿಗಳ ಮೇಲೂ IT ದಾಳಿ ನಡೆದಿದೆ. ಮಾತ್ರವಲ್ಲ ಸಚಿವರಿಗೆ ಸೇರಿದ ಕಚೇರಿಗಳ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share.
Leave A Reply