Jaishankar Tweet: ಭಾರತ ಮತ್ತು ಪಾಕ್ (India Vs Pak ) ಕದನಕ್ಕೆ ವಿರಾಮ ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump)ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ (Vikram Mishri) ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.
ಆಪರೇಷನ್ ಸಿಂಧೂರ (Operation Sindoor) ಬಗ್ಗೆ ವಿಶೇಷ ಬ್ರೀಫಿಂಗ್ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳ ಕುರಿತು ಕರ್ನಲ್ ಸೋಫಿಯಾ ಖುರೇಷಿ ಗಮನಕ್ಕೆ ತಂದಿದ್ದಾರೆ. ಮಾತ್ರವಲ್ಲ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಕೂಡ ಸಿರ್ಸಾ ಮತ್ತು ಸೂರತ್ಗಢದಂತಹ ವಿವಿಧ ಭಾರತೀಯ ಮಿಲಿಟರಿ ನೆಲೆಗಳು ಯಾವುದೇ ದಾಳಿಗೊಳಗಾಗಿಲ್ಲ ಎನ್ನುವುದಕ್ಕೆ ಹಲವಾರು ಪುರಾವೆಗಳನ್ನು ಒದಗಿಸಿದ್ದಾರೆ. ಇವೆಲ್ಲವೂ ಪಾಕಿಸ್ತಾನ ಸುಳ್ಳು ಪ್ರಚಾರ ಮಾಡುತ್ತಿದೆ ಎನ್ನುವುದನ್ನು ಸಾಬೀತುಪಡಿಸುತ್ತಿದೆ” ಎಂದು ತಿಳಿಸಿದರು.
ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸುದ್ದಿಗೋಷ್ಠಿಯನ್ನು ನಡೆಸಿ, ಮೇ 12ರಂದು ಪಾಕ್ ನಮ್ಮ ಜತೆಗೆ ಮಾತುಕತೆ ನಡೆಸಲಿದೆ. ಅಲ್ಲಿಯವೆರಗೆ ಕದನ ವಿರಾಮ ಘೋಷಣೆ ಎಂದು ಹೇಳಿದರು.
Also Read: Operation Sindoor : ‘ಆಪರೇಷನ್ ಸಿಂಧೂರ್’ ಸಿನಿಮಾ ಅನೌನ್ಸ್! ಪೋಸ್ಟರ್ ನೋಡಿ ನೆಟ್ಟಿಗರು ಹೇಳಿದ್ದೇನು?
ಇದೀಗ ಈ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಕೂಡ ಎಕ್ಸ್ ಮೂಲಕ ಟ್ವೀಟ್ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದಿನಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿದ ವಿದೇಶಾಂಗ ಸಚಿವ ಯಾವುದೇ ಕಾರಣಕ್ಕೂ ನಾವೂ ರಾಜಿಗೆ ಒಪ್ಪಿಗೆ ನೀಡುವುದಿಲ್ಲ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.