Site icon BosstvKannada

ಕೆ.ಎನ್.ರಾಜಣ್ಣ ಸಚಿವ ಸ್ಥಾನದಿಂದ ವಜಾ : ಅತಿರೇಕಕ್ಕೇರಿದ ಬೆಂಬಲಿಗರ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಕೆ.ಎನ್ ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇದನ್ನು ವಿರೋಧಿಸಿ ತುಮಕೂರಿನ ಮಧುಗಿರಿಯಲ್ಲಿ ಅವರ ಬೆಂಬಲಿಗರು, ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು, ಪೆಟ್ರೋಲ್ ಸುರಿದುಕೊಂಡು ಜೀವ ತೆಗೆದುಕೊಳ್ಳಲು ಬೆಂಬಲಿಗರು ಯತ್ನಿಸಿದ್ದಾರೆ.

ಕೆ.ಎನ್ ರಾಜಣ್ಣರಿಂದ ರಾಜೀನಾಮೆ ಪಡೆದ ಕಾರಣ ತುಮಕೂರಿನ ಮಧುಗಿರಿಯ ಅಂಬೇಡ್ಕರ್ ವೃತ್ತದಲ್ಲಿ ಅವರ ನೂರಾರು ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ವೇಳೆ ಆಘಾತಕಾರಿ ಘಟನೆಗಳು ನಡೆದಿವೆ. ಈ ವೇಳೆ ಇಬ್ಬರು ವ್ಯಕ್ತಿಗಳು ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಸಾವಿಗೆ ಯತ್ನ ಮಾಡಿದ್ದಾರೆ. ಇನ್ನೊಬ್ಬ ವಿಷ ಸೇವಿಸಿ ಜೀವ ತೆಗೆದುಕೊಳ್ಳಲು ಮುಂದಾಗಿದ್ದನು. ಮತ್ತೊರ್ವ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ತಕ್ಷಣ ಪೊಲೀಸರು ಮಧ್ಯೆ ಪ್ರವೇಶಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ. ಕೆ.ಎನ್​ ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Exit mobile version