Site icon BosstvKannada

ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ : ಪುತ್ರ ಎಂಎಲ್‌ಸಿ ರಾಜೇಂದ್ರ ಬೇಸರ

ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆಯಿಂದ ಸಿದ್ದು ಸಂಪುಟದ ಮತ್ತೊಂದು ವಿಕೆಟ್‌ ಔಟ್‌ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕೆಲ ತಿಂಗಳ ಹಿಂದಷ್ಟೇ ಸ್ವಪಕ್ಷದ ವಿರುದ್ಧ ಗುಡುಗಿದ್ದ ರಾಜಣ್ಣ, ರಾಹುಲ್ ಗಾಂಧಿಮತಗಳ್ಳತನ ಆರೋಪದ ವಿರುದ್ಧವೂ ಧ್ವನಿಯೆತ್ತಿದ್ದರು. ಈ ಮಧ್ಯೆ ಹೈಕಮಾಂಡ್ ಸಚಿವ ಕೆಎನ್ ರಾಜಣ್ಣ ಅವರನ್ನು ಉಚ್ಛಾಟನೆ ಮಾಡುವ ಬಗ್ಗೆಯೂ ಮಾತುಗಳು ಕೇಳಿಬರುತ್ತಿದೆ. ಇದೀಗ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ರಾಜಣ್ಣ ಪುತ್ರ ರಾಜೇಂದ್ರ ಅವರು ಭಾವುಕರಾಗಿದ್ದಾರೆ.

ಅಪ್ಪ ಮಂತ್ರಿ ಸ್ಥಾನ ಕಳೆದುಕೊಂಡು, ಪಕ್ಷದಿಂದ ಉಚ್ಚಾಟನೆಗೊಳ್ಳುವ ಭೀತಿಯ ಬಗ್ಗೆ ಮಗ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದ ತಂದೆಯ ಪರಿಸ್ಥಿತಿ ಕಂಡು ಪರಿಷತ್ ಸದಸ್ಯ ರಾಜೇಂದ್ರ ಭಾವುಕಗೊಂಡಿದ್ದಾರೆ. ಈ ವಿಚಾರವಾಗಿ ಪುತ್ರ ಎಂಎಲ್ಸಿ ರಾಜೇಂದ್ರ ರಾಜಣ್ಣ ಪ್ರತಿಕ್ರಿಯೆ ನೀಡಿ, ಸ್ಥಾನದಿಂದ ತೆಗೆಯಲು ಬರಲ್ಲ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಸರ್ಕಾರ ಇತ್ತು ಲೋಪದೋಷ ಸರಿ ಪಡಿಸಿಕೊಳ್ಳಬೇಕೆಂದು ಎಂದು ರಾಜಣ್ಣ ಹೇಳಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಮತ್ತು ರಾಜಣ್ಣ ಅವರನ್ನು ಭೇಟಿ ಮಾಡುತ್ತೇನೆ ಎಂದರು.

Exit mobile version