ಬಹುಭಾಷಾ ನಟ ಕಮಲ್ ಹಾಸನ್ (Kamal Haasan) ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಕಮಲ್​ ಹಾಸನ್​ ಅವರ ಹೇಳಿಕೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿ ನಟ ಕಮಲ್​ ಹಾಸನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: RCBಗೆ ವಿಲನ್‌ ಆದ ರಿಷಬ್‌ ಪಂತ್.‌..!

ಇದೀಗ, ನಟ ಕಮಲ್​ ಹಾಸನ್​ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್​ ಹಾಸನ್​ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ಅಹಿಂಸಾ ಚೇತನ್ ಅವರು ಟ್ವೀಟ್ ಮಾಡಿದ್ದು, ಕಮಲ್ ಹಾಸನ್ ಹೇಳಿಕೆ ತಪ್ಪು ಎಂದು ಖಂಡಿಸಿದ್ದಾರೆ

Share.
Leave A Reply