Site icon BosstvKannada

Kannada Sahitya Sammelana : ಬುಕರ್‌ ವಿಜೇತೆ ಬಾನು ಮುಷ್ತಾಕ್ 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆ

ಈ ಬಾರಿ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ (Kannada Sahitya Sammelana) ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಪರಿಷತ್ತಿನ ಷತ್ತಿನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್​ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್​ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.

Exit mobile version