ಪ್ಯಾನ್ ಇಂಡಿಯಾ ಮಾತ್ರವಲ್ಲದೇ ಇಡೀ ಪ್ರಪಂಚದಲ್ಲೇ ಭಾರೀ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡದಿಂದ ಸಿನಿ ಪ್ರಿಯರಿಗೆ ಗುಡ್ನ್ಯೂಸ್ ಒಂದು ಸಿಕ್ಕಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾಂತಾರ ಚಾಪ್ಟರ್-1ಗೆ ಕಾತರದಿಂದ ಕಾಯುತ್ತಿರುವ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಹೊಂಬಾಳೆ ಸಂಸ್ಥೆ ಕಾಂತಾರ-1ರ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
ಕಾಂತಾರ ಪ್ರೀಕ್ವೆಲ್ ಮೊದಲೇ ನಿರ್ಧರಿಸಿದಂತೆ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಶೆಟ್ಟಿ ಮತ್ತು ಚಿತ್ರದ ನಿರ್ಮಾಪಕರು ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ. ಇದೀಗ ಇಂದು ರಿಲೀಸ್ ಆಗಿರುವ ಪೋಸ್ಟರ್ ಚಿತ್ರದ ರಿಲೀಸ್ ಡೇಟ್ ಅನ್ನು ಮತ್ತೆ ದೃಢಪಡಿಸಿದೆ.
ಕಾಂತಾರ: ಚಾಪ್ಟರ್ 1 ಚಿತ್ರದ ಸೆಟ್ನಲ್ಲಿ ಸಾಕಷ್ಟ ಅವಘಡಗಳು ಸಂಭವಿಸಿದವು. ಈ ಕಾರಣದಿಂದ ಸಿನಿಮಾ ರಿಲೀಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಈ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಬ್ಬಿದ್ದವು. ಆದರೆ, ಇದನ್ನು ತಂಡ ಅಲ್ಲಗಳೆದಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ಬಿಡುಗಡೆ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ.
