
ಅದ್ಧೂರಿ ಟ್ರೈಲರ್ ಮೂಲಕ ಧೂಳೆಬ್ಬಿಸಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಪ್ರೇಕ್ಷಕರ ನಿರೀಕ್ಷೆಯನ್ನ ಡಬಲ್ ಆಗಿಸಿದೆ. ಅಕ್ಟೋಬರ್ 2ರಂದು ಕಾಂತಾರ ಚಾಪ್ಟರ್ 1 ವರ್ಲ್ಡ್ ವೈಡ್ ರಿಲೀಸ್ ಆಗಿ ಅಬ್ಬರಿಸಲಿದೆ. ಈ ನಡುವೆ ಟಿಕೆಟ್ ಬುಕಿಂಗ್ ಕೂಡ ಶುರುವಾಗಿದೆ. ಸೆಪ್ಟೆಂಬರ್ 26 ಮಧ್ಯಾಹ್ನ 12.29ರಿಂದ ಟಿಕೆಟ್ ಬುಕಿಂಗ್ ಶುರುವಾಗಲಿದೆ ಅಂತಾ ಚಿತ್ರತಂಡ ಮಾಹಿತಿ ನೀಡಿದೆ. ಬಹುದೊಡ್ಡ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತೆರೆಕಾಣಲಿದ್ದು ಭಾರತದಾದ್ಯಂತ 7000ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ಒಟ್ಟು 7 ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ. ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ 200 ರೂಪಾಯಿ ಮೀರಬಾರದು ಎಂದು ಇತ್ತೀಚೆಗೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಅದರ ವಿರುದ್ಧ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಮತ್ತು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದ್ದವು. ಆದ್ದರಿಂದ ಚಿತ್ರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ ‘ಕಾಂತಾರ: ಚಾಪ್ಟರ್ 1’ ಟಿಕೆಟ್ ಬೆಲೆ ದುಬಾರಿಯಾಗಿರೋದಂತೂ ಪಕ್ಕಾ.
2022ರಲ್ಲಿ ಬಂದಿದ್ದ ‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಿಟ್ ಆಗಿತ್ತು. ಈಗ ಅದರ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ಕೂಡ ಅದೇ ನಿರೀಕ್ಷೆಯಿಂದ ಥಿಯೇಟರ್‌ಗೆ ಬರಲು ಸಜ್ಜಾಗಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.
Read Also : ಸೂರ್ಯನ ಬೆಳಕಿಗೆ ಹಾತೊರೆದ ದಾಸ! : ಪೊಲೀಸರ ವಿರುದ್ಧವೇ ದರ್ಶನ್ ದೂರು