Site icon BosstvKannada

ಕರ್ನಾಟಕ ಸರ್ಕಾರ vs ರಾಜ್ಯಪಾಲರ ಸಂಘರ್ಷ: ಸರ್ಕಾರಕ್ಕೆ ಶಾಕ್


ಬೆಂಗಳೂರು: ಕೇರಳ, ತಮಿಳುನಾಡಿನಂತೆ ರಾಜ್ಯದಲ್ಲೂ ರಾಜ್ಯಪಾಲರು ಹಾಗೂ ಸರ್ಕಾರದ ವಿರುದ್ಧ ಸಂಘರ್ಷ ಆರಂಭವಾಗಿದೆ. ಇಂದಿನಿಂದ ನಡೆಯುತ್ತಿರುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಒಂದೇ ವಾಕ್ಯದಲ್ಲಿ ತಮ್ಮ ಭಾಷಣ ಮುಗಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದರಿಂದಾಗಿ ರಾಜ್ಯ ಸರ್ಕಾರವು ವಿಶೇಷ ಅಧಿವೇಶನ ಕರೆದಿತ್ತು. ಈ ವಿಷಯವಾಗಿ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧ ಸಂಘರ್ಷ ಶುರುವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿಧಾನಸಭೆಗೆ ಬುರುವುದೇ ಅನುಮಾನ ಎನ್ನಲಾಗಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವೊಲಿಸಿತ್ತು. ಆ ವೇಳೆ ರಾಜ್ಯಪಾಲರು ಕೆಲವು 11 ಪ್ಯಾರಾಗಳನ್ನು ಕೈ ಬಿಡಬೇಕೆಂದು ಸೂಚಿಸಿದ್ದರು. ಆಗ ಸಿಎಂ ಜೊತೆ ಚರ್ಚಿಸಿ, ನಿರ್ಧಾರ ಕೈಗೊಳ್ಳುವುದಾಗಿ ನಿಯೋಗ ತಿಳಿಸಿತ್ತು. ಅದರಂತೆ ರಾಜ್ಯಪಾಲರು ಅಧಿವೇಶನಕ್ಕೆ ಆಗಮಿಸಿ, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿದ್ದಾರೆ. ಆದರೆ, ಸರ್ಕಾರ ನೀಡಿರುವ ಭಾಷಣದ ಪ್ರತಿಯನ್ನು ಪೂರ್ತಿ ಓದಿಲ್ಲ. ಅವರು ಸರ್ಕಾರ ನೀಡಿದ್ದ ಪ್ರತಿ ಓದದೆ ತೆರಳಿದ್ದಾರೆ.

ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾ ನಡೆದಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಒಂದೆರಡು ಲೈನ್ ಮಾತ್ರ ಓದಿ, ಶುಭಾಶಯ ಕೋರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.

Exit mobile version