Karnataka Rain: ಬಿರು ಬೇಸಿಗೆಗೆ ಕಾದುಕೆಂಡವಾಗಿದ್ದ ಸಿಲಿಕಾನ್ ಸಿಟಿಗೆ ವರುಣ ತಂಪೆರೆದಿದ್ದಾನೆ. ನಿನ್ನೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದೆ. ಟ್ರಾಫಿಕ್​ನಲ್ಲಿ ಸಿಲುಕಿ ಸಾರ್ವಜನಿಕರು ಪರದಾಡುವಂತಾಯ್ತು. ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಹಲವೆಡೆ ಉತ್ತಮ ಮಳೆಯಾಗ್ತಿದೆ. ಬೇಸಿಗೆಯಲ್ಲೂ ಮಳೆರಾಯ ಕೃಪೆ ತೋರಿದ್ದಾನೆ. ಇಳೆಯನ್ನು ತಂಪಾಗಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗ್ತಿದೆ. ಇನ್ನು ಮೇ 14, 15 ರಂದು ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Also Read: Earthquake Hits Pakistan : ಸಿಂದೂರ ಆಪರೇಷನ್‌ ಬಳಿಕ ಪಾಕ್‌ನಲ್ಲಿ 4.6 ತೀವ್ರತೆಯ ಭೂಕಂಪ

ಮಳೆಯ ಮುನ್ನೆಚ್ಚರಿಕೆ ಹಿನ್ನೆಲೆ ಕೆಲ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share.
Leave A Reply